ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೈಕೋರ್ಟ್​ ಗ್ರೀನ್ ಸಿಗ್ನಲ್ ಕೊಟಿದೆ

 


ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿ ಕೋರಿದ್ದ ರಿಟ್​ ಅರ್ಜಿಯನ್ನು ವಜಾ ಮಾಡಿರುವ ಕರ್ನಾಟಕ ಹೈಕೋರ್ಟ್,ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರದಂತೆ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಪರೀಕ್ಷೆ ಕುರಿತ ಗೊಂದಲಗಳಿಗೆ ತೆರೆ ಎಳೆದಿದೆ.ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸೋಮವಾರ ಅರ್ಜಿಯನ್ನು ರದ್ದುಪಡಿಸಿದೆ.ಎಸ್ಸೆಸ್ಸೆಲ್ಸಿ ಪರೀಕ್ಷೆ 6 ದಿನ ಬದಲು 2 ದಿನ ನಡೆಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಮೂಲಕ ಜುಲೈ 19ರಿಂದ ಪರೀಕ್ಷೆ ನಡೆಯುವುದು ದೃಢಪಟ್ಟಂತಾಗಿದೆ.ಜುಲೈ 19 ರಂದು ಸಮಾಜ ವಿಜ್ಞಾನ, ವಿಜ್ಞಾನ ಹಾಗೂ ಗಣಿತ ಪರೀಕ್ಷೆ ಹಾಗೂ 22 ರಂದು ಭಾಷಾ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ.

No comments:

Post a Comment