ಸಿಎಂ ಯಡಿಯೂರಪ್ಪ ರಾಜೀನಾಮೆ



 

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೊನೆಗೂ ಸಿಎಂ ಯಡಿಯೂರಪ್ಪಮೌನ ಮುರಿದಿದ್ದು, ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ, ಈ ವಿಚಾರದಲ್ಲಿ ಯಾರೂ ಕೂಡ ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿದ ಸಿಎಂ, ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ.ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ.ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದಿದ್ದಾರೆ.

No comments:

Post a Comment